ತಾಯಿಯ ಬೆನ್ನಲ್ಲೇ ಸಹೋದರಿಯನ್ನು ಕಳೆದುಕೊಂಡ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾಕೃಷ್ಣಮೂರ್ತಿ
ಚಿಕ್ಕಮಗಳೂರು: ಭಾರತೀಯ ಮಹಿಳಾ ಕ್ರಿಕೆಟರ್ ವೇದಾಕೃಷ್ಣಮೂರ್ತಿ ಕೊರೊನಾ ಮಹಾಮಾರಿಯಿಂದ ತಾಯಿಯನ್ನು ಕಳೆದುಕೊಂಡ ಬೆನ್ನಲ್ಲೇ ಇದೀಗ ಸಹೋದರಿಯನ್ನೂ ಕಳೆದುಕೊಂಡು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಹೋದರಿ ವತ್ಸಲಾ ಕೃಷ್ಣಮೂರ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಳೆದ ವಾರ ವೇದಕೃಷ್ಣಮೂರ್ತಿ ತಾಯಿ ಚೆಲುವಾಂಬ (63) ಕೋವಿಡ್ ಗೆ ಬಲಿಯಾಗಿದ್ದರು. ಇದಾದ ಒಂದೇ ವಾರದಲ್ಲಿ ಸಹೋದರಿಯನ್ನು ಕಳೆದುಕೊಂಡಿದ್ದಾರೆ. ಒಂದೇ ಕುಟುಂಬದ ಐವರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಕಡೂರು ತಾಲೂಕಿನ ಬೀರೂರು ರಸ್ತೆ ಬಳಿಯಿ ಇರುವ ವೇದಾ ಕೃಷ್ಣಮೂರ್ತಿ ಅವರ […]