ಕೊರೆನೋ ಭೀತಿ: ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲು ಶಾಸಕ ಕಾಮತ್ ಸೂಚನೆ

ಮಂಗಳೂರು: ಜಗತ್ತನ್ನು ಭೀತಿಗೊಳಿಸಿರುವ ಕೊರೆನೋ ವೈರಸ್ ಹರಡದಂತೆ ಎಚ್ಚರ ವಹಿಸಲು ಜಿಲ್ಲಾಡಳಿತಕ್ಕೆ ಶಾಸಕ ಕಾಮತ್ ಅವರು ಸೂಚಿಸಿದ್ದಾರೆ. ಕೇರಳ ರಾಜ್ಯದಿಂದ ಬರುವ ವಾಹನಗಳನ್ನು ತಲಪಾಡಿ ಗಡಿಭಾಗದಲ್ಲಿ ತಪಾಸಣೆ ನಡೆಸಬೇಕು ಹಾಗೂ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ, ಮಂಗಳೂರಿನಲ್ಲಿರುವ ಖಾಸಗಿ ಹಾಗೂ ಸರಕಾರಿ ಬಸ್ ನಿಲ್ದಾಣದಲ್ಲಿ ಕೂಡ ವಿಶೇಷ ಕಟ್ಟೆಚ್ಚರ ವಹಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ಈ ವರೆಗೂ ಕೊರೆನಾ ವೈರಸ್ ಕುರಿತು ಮಂಗಳೂರಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು […]