ಹೊರ ರಾಜ್ಯದ ಮೀನಿನ ಲಾರಿಗಳಿಗೆ ಪ್ರತ್ಯೇಕ ವ್ಯವಸ್ಥೆ: ಶಾಸಕ ಕಾಮತ್

ಮಂಗಳೂರು: ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು. ಆದರೆ ಇಲ್ಲಿಗೆ ಸಾರ್ವಜನಿಕ ಪ್ರವೇಶ ಇಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಹಳೆಬಂದರು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಹೊರರಾಜ್ಯಗಳ ಸುಮಾರು 25ರಷ್ಟು ಬೃಹತ್ ಲಾರಿಗಳು ಮೀನುಗಳ ಸಮೇತ ಮಂಗಳೂರಿಗೆ ಆಗಮಿಸುತ್ತಿವೆ. ಆದರೆ ಸದ್ಯ ಅವರಿಗೆ ಸೂಕ್ತ ಸ್ಥಳಾವಕಾಶವಿರಲಿಲ್ಲ. ಹೀಗಾಗಿ ಹಳೆ […]
ರಾಜ್ಯದ ಶ್ರೇಷ್ಠ ಬಜೆಟ್: ಶಾಸಕ ಡಿ. ವೇದವ್ಯಾಸ ಕಾಮತ್

ಮಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಕೃಷಿಕರಿಗೆ, ಜನಸಾಮಾನ್ಯರಿಗೆ, ಮೀನುಗಾರರಿಗೆ, ಮಹಿಳಾ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಆರೋಗ್ಯ ಕ್ಷೇತ್ರಕ್ಕೆ, ಪ್ರವಾಸೋದ್ಯಮ ಮತ್ತು ವಿವಿಧ ನಿಗಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿ ಸರ್ವಜನ ಸುಖ ಮತ್ತು ಸರ್ವಜನ ಹಿತವಾಗಿರುವ ಬಜೆಟ್ ಮಂಡಿಸಿರುವ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸರ್ವಶ್ರೇಷ್ಠ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳಾ ಮೀನುಗಾರರ ಸಬಲೀಕರಣಕ್ಕಾಗಿ 1.5 ಕೋಟಿ ರೂ. ಅನುದಾನದಲ್ಲಿ ಮರ್ತ್ಯ ವಿಕಾಸ ಯೋಜನೆ, […]