ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ: ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ: ಶಾಸಕ ಕಾಮತ್
ಮಂಗಳೂರು: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಪೂರ್ಣ ಪ್ರಮಾಣದ ಸಹಕಾರ ಒದಗಿಸುವುದಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಎಕ್ಕೂರು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಿದ್ದು ನೂತನ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು ಎಂದರು. ಈಗಾಗಲೇ ಬೆಂಗ್ರೆ ಪ್ರದೇಶ ಸೇರಿದಂತೆ ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಾರಂಭವಾಗಿದ್ದು ಇನ್ನಷ್ಟು ಅಂಗವನಾಡಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಬೇಡಿಕೆಗಳನ್ನು […]