ಕರಾವಳಿಯಲ್ಲಿ ಶಾಂತಿ ಕದಡುವ ಕೃತ್ಯ ನಡೆಸಿದರೆ ಸುಮ್ಮನಿರುವುದಿಲ್ಲ: ಶಾಸಕ ಕಾಮತ್

ಮಂಗಳೂರು: “ಭಾರತ ಹಿಂದೂರಾಷ್ಟ್ರ” ಎಂದ ಯುವಕನೊಬ್ಬನ ಮೇಲೆ ಗುಂಪೊಂದು ಅಮಾನವೀಯ ಹಲ್ಲೆ ನಡೆಸಿರುವ ಘಟನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಖಂಡಿಸಿದ್ದು, ಶಾಂತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯವನ್ನು ಯಾರೇ ನಡೆಸಿದರೂ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಶಾಂತಿಯನ್ನು ಕದಡುವ ಕಾರ್ಯವನ್ನು ಯಾರೂ ಮಾಡಬಾರದು. ಶಾಂತಿ ಸಾಮರಸ್ಯ ಕಾಯ್ದುಕೊಳ್ಳಲು ಸರ್ವರೂ ಸಹಕರಿಸಬೇಕು. ಒಂದು ವೇಳೆ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮಾಡಿದರೆ […]

ಪ್ರಾಪರ್ಟಿ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಸಿಎಂ ಬಿಎಸ್ ವೈ ಅವರೊಂದಿಗೆ ಶಾಸಕ ಕಾಮತ್ ಚರ್ಚೆ

ಮಂಗಳೂರು: ಮಂಗಳೂರಿನಲ್ಲಿ ಕಡ್ಡಾಯವಾಗಿ ಜಾರಿಯಲ್ಲಿರುವ ಪ್ರಾಪರ್ಟಿ ಕಾರ್ಡ್ ಮಾಡಿಸಲು ನಾಗರಿಕರಿಗೆ ಅನೇಕ ತೊಂದರೆಗಳು ಆಗುತ್ತಿರುವುದರಿಂದ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ದೃಷ್ಟಿಯಿಂದ ಸೂಕ್ತ ಸೂಚನೆಗಳನ್ನು ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವ ಮಾಡಿದ್ದಾರೆ. ಅಲ್ಲದೇ ಈ ಕುರಿತ ಪರಿಹಾರೋಪಾಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಂಗಳೂರು ಸಬ್ ರಿಜಿಸ್ಟಾರ್ ತಾಲೂಕು ಮತ್ತು ನಗರದಲ್ಲಿ ಒಟ್ಟು 1,70,000 ಕ್ಕೂ ಅಧಿಕ ಆಸ್ತಿಗಳಿದ್ದು, ಈಗ ದೊರಕಿರುವ ಮಾಹಿತಿ ಪ್ರಕಾರ 50 […]