ವೀರಪ್ಪ ಮೊಯಿಲಿಯ ಬಡವರ ಪರ ನಿಲುವು ಪ್ರಶಂಸಾರ್ಹ

ಉಡುಪಿ:ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಿಸಾನ್ ಸಭಾ ಸಭಾಂಗಣದ ಉದ್ಘಾಟಿಸಿ, ಟ್ರಸ್ಟ್ ನ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ35 ನೇ ವರ್ಷದ ಸಮಾರಂಭ ವನ್ನು ಉದ್ಘಾಟಿಸಿದ ನಂತರ ಮಾತನಾಡಿದರು. ಪ್ರಾಮಾಣಿಕ ರಾಜಕಾರಣಿ:ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಳ್ಳುತ್ತಾ, ತಾನು ಕುಟುಂಬದ ಮೊದಲ ಪದವೀಧರನಾಗಿದ್ದು, ವೀರಪ್ಪ ಮೊಯಿಲಿಯವರಂತೆ ತಾನೂ ಕಷ್ಟದ ಜೀವನವನ್ನು ಕಂಡಿರುವುದಾಗಿ ತಿಳಿಸಿದರು. ವೀರಪ್ಪ ಮೊಯಿಲಿಯವರು ಸಮಾಜದ ಬಡವರ್ಗದವರ […]