ನೀರಿನ ಸಮಸ್ಯೆಗೆ ಸ್ಪಂದಿಸಿದ ಸಿಎಂ ಎಚ್‍ಡಿಕೆಗೆ ಧನ್ಯವಾದ ತಿಳಿಸಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ ಮೇ29: ಧರ್ಮಸ್ಥಳದಲ್ಲಿ ನೀರಿನ ಅಭಾವಕ್ಕೆ ಸ್ಪಂಧಿಸಿರುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರು ಪತ್ರದ ಮೂಲಕ ಕೃತಜ್ಞತೆ ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಕಂಡು ಬಂದ ತಕ್ಷಣ ನಿಮ್ಮ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಜಲವಾಹಿನಿ ಮಂಡಳಿ ಮತ್ತು ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಗಮನಿಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ನಮ್ಮ ಕೋರಿಕೆಯಂತೆ ಕುಡಿಯುವ ನೀರಿನ ಕೊರತೆ ಸಮಸ್ಯೆಗೆ ಪರಿಹಾರವಾಗಿ ನೇತ್ರಾವತಿ ಮತ್ತು […]