ಗಗನಕ್ಕೇರಿದ ದಿನಸಿ ಹಾಗೂ ತರಕಾರಿ ಬೆಲೆ: ಗ್ರಾಹಕರೇ ಇಲ್ಲದಕ್ಕಾಗಿ ವ್ಯಾಪಾರಿಗಳು ಕಂಗಾಲು

ಮೈಸೂರು : ಮುಂಗಾರು ಮಳೆ ಕೈ ಕೊಟ್ಟಿದೆ. ರೈತರು ಹಾಕಿದ ಬಿತ್ತನೆ ಬೀಜಗಳು ಜಮೀನಿನಲ್ಲಿಯೇ ಮಳೆ ಇಲ್ಲದೆ ಒಣಗುತ್ತಿದ್ದರೆ, ಮತ್ತೊಂದು ಕಡೆ ತರಕಾರಿ ಬೆಳೆಯಲು ಮಳೆ ಇಲ್ಲದ ಕಾರಣ ತರಕಾರಿ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದ ಹಣ್ಣು ಮತ್ತು ತರಕಾರಿಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಕಳೆದ ಒಂದು ವಾರದಿಂದ ತರಕಾರಿ ಬೆಲೆ 100ರ ಗಡಿ ದಾಟಿದೆ. ಇದರಿಂದ ವರ್ತಕರು ಹಾಗೂ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೈ ಕೊಟ್ಟಿದ್ದು, ಅಗತ್ಯ ವಸ್ತುಗಳಾದ ದಿನಸಿ ಹಾಗೂ ತರಕಾರಿ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರು […]