ನಿಯಮ ಉಲ್ಲಂಘನೆ ವಾಹನ ಚಾಲಕರ ಲೈಸೆನ್ಸ್ ರದ್ದತಿಗೆ ಪ್ರಸ್ಥಾವನೆ,  ಸರಕು ಸಾಗಾಟ ವಾಹನದಲ್ಲಿ ಮಾನವ ಸಾಗಾಟ

ಉಡುಪಿ: ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ಶಾಲಾ ಮಕ್ಕಳನ್ನು ಸಾಗಿಸುತಿದ್ದ 51 ಶಾಲಾ ವಾಹನ, ಮಾನವರನ್ನು ಸಾಗಿಸುತಿದ್ದ 100 ಸರಕು ಸಾಗಾಟ ವಾಹನಗಳ ಮೇಲೆ ಕೇಸು ದಾಖಲಿಸಿ ದಂಡ ವಿಧಿಸಲಾಗಿದ್ದು, ಮೂರು ತಿಂಗಳಮಟ್ಟಿಗೆ ಚಾಲಕರ ಪರವಾನಿಗೆ ಲೈಸೆನ್ಸ್ ರದ್ಧತಿಗೆ ಆರ್‌ಟಿಒಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಎಸ್‌ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಈ ಕುರಿತು ಸಾರ್ವಜನಿಕರು‌ ಮನವಿ ಮಾಡಿದರು. ರಿಕ್ಷಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ […]

ಮತದಾನ ದಿನದಂದು ವಾಹನ ಚಾಲಕರು ಮತದಾರರಿಗೆ ಆಮಿಷ ನೀಡಿದರೆ ಕಠಿಣ ಕ್ರಮ: ಡಿಸಿ ಎಚ್ಚರಿಕೆ

ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ , ಮತದಾರರಿಗೆ ಉಚಿತ ವಾಹನ ಸೌಕರ್ಯ, ಸಾಮಥ್ರ್ಯಕ್ಕಿಂತ ಹೆಚ್ಚು ಜನರ ಸಾಗಾಟ ಮುಂತಾದ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಸಂಬಂದಪಟ್ಟ  ವಾಹನವನ್ನು ಸ್ಥಳದಲ್ಲೇ ಸೀಜ್ ಮಾಡಿ,  ವಾಹನ ಚಾಲಕರು, ವಾಹನಗಳ ಮಾಲೀಕರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾದಿಕಾರಿ ಹಾಗೂ  ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ಖಾಸಗಿ ಬಸ್ ಸಂಘ, […]