ಫೆ. 22ರಿಂದ ಮಾರ್ಚ್ 1ರವರೆಗೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ

ಉಜಿರೆ: ಫೆ.22ರಿಂದ ಮಾರ್ಚ್ 1ರವರೆಗೆ ವೇಣೂರಿನಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮಪ್ರಸಾದ ಅಜಿಲ ಹೇಳಿದರು. ಸೋಮವಾರ ವೇಣೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೈನರ ಸಂಪ್ರದಾಯದಂತೆ ಪ್ರತಿ 12ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷರಾಗಿರುವ ವೇಣೂರಿನ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ಮಹಾಮಸ್ತಕಾಭಿಷೇಕ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ 30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ […]