ಜೆರೋಸಾ ಶಾಲೆ ಪ್ರಕರಣದಲ್ಲಿ ಶಾಸಕರ ನಡೆ ಖಂಡನೀಯ: ವೆರೋನಿಕಾ ಕರ್ನೆಲಿಯೋ

ಮಂಗಳೂರು: ಇಲ್ಲಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೇಗೇಡಿನದ್ದು ಎಂದು ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಏನೋ ಒಂದು ವಿಚಾರ ನಡೆದಿದ್ದು ಅದನ್ನೆ ನೆಪವಾಗಿಟ್ಟುಕೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಶಾಲೆಯ ಗೇಟಿನ ಹೊರಗಡೆ ಮುಗ್ದ ಮಕ್ಕಳನ್ನು ಬಳಸಿಕೊಂಡು ಪ್ರತಿಭಟನೆ ಮಾಡಿದ್ದು ಅಲ್ಲದೆ ಘೋಷಣೆಗಳನ್ನು ಕೂಗಲು ಪ್ರೇರಿಪಿಸಿರುವುದು ಖಂಡನೀಯ. ಅವರು ಒರ್ವ ಶಾಸಕರು ಎಂಬುದನ್ನು ಮರೆತು ನಡೆದುಕೊಂಡ ವರ್ತನೆ ನಾಗರೀಕ […]
ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ ಬಜೆಟ್ ಆಗಿದೆ. ಗ್ಯಾರಂಟಿಗಳಿಗೆ ಅನುದಾನ ನೀಡಿದ ಮೇಲೂ ಆರ್ಥಿಕ ಸುಸ್ಥಿತಿಯನ್ನು ನಿಭಾಯಿಸಿ ಗ್ಯಾರಂಟಿಗಳ ಜೊತೆ ಅಗತ್ಯ ಅಭಿವೃದ್ದಿಗೆ ಯಾವುದೇ ಕೊರತೆ ಮಾಡದೇ ಇರುವಂತಹ ಪ್ರಗತಿಶೀಲ ಬಜೆಟನ್ನು ನಮ್ಮ ಮುಖ್ಯಮಂತ್ರಿಗಳು […]
ನೇಜಾರು ಹತ್ಯೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸರ ಕಾರ್ಯ ಶ್ಲಾಘನೀಯ: ವೆರೋನಿಕಾ ಕರ್ನೆಲಿಯೋ

ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದ್ದು, ಪ್ರಕರಣವನ್ನು ಪೊಲೀಸ್ ಇಲಾಖೆ ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ ಪ್ರಕರಣದಿಂದಾಗಿ ಜನತೆ ಭಯದಲ್ಲಿ ಬದುಕುವ ವಾತಾವರಣವನ್ನು ಸೃಷ್ಟಿಯಾಗಿತ್ತು. ಜಿಲ್ಲೆಯ ದಕ್ಷ […]
ಸಿದ್ದರಾಮಯ್ಯನವರನ್ನು ಹೊಡೆದು ಹಾಕಿ ಎಂದ ಅಶ್ವಥ್ ನಾರಾಯಣ್ ವಿರುದ್ದ ಪ್ರಕರಣ ದಾಖಲಿಸಿ: ವೆರೋನಿಕಾ ಕರ್ನೆಲಿಯೋ ಒತ್ತಾಯ

ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ. ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ […]
ಅಂಗನವಾಡಿ ಕಾರ್ಯಕರ್ತೆಯರ ನೋವಿಗೆ ಸ್ಪಂದಿಸದ ಬೊಮ್ಮಾಯಿಯವರ ಕುರುಡು ಸರ್ಕಾರ: ವೆರೋನಿಕಾ ಕರ್ನೆಲಿಯೋ

ಉಡುಪಿ: ಅಂಗವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಕಣ್ಣಿದ್ದು ಕುರುಡಾಗಿರುವ ಬಸವರಾಜ ಬೊಮ್ಮಾಯಿ ಅವರು ಮಹಿಳೆಯರಿಗೆ ನೀಡುವ ಗೌರವ ಏನು ಎನ್ನುವುದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೊ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕುಳಿತು ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಪರಿಗಣಿಸುವ ಕನಿಷ್ಠ ಪ್ರಯತ್ನ ಕೂಡ […]