ಸಂಕಷ್ಟದಲ್ಲಿರುವ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ವರದಾನ: ವೆರೋನಿಕಾ ಕರ್ನೆಲಿಯೊ

ಉಡುಪಿ: ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಅಭಿಪ್ರಾಯ ಪಟ್ಟಿದ್ದಾರೆ. ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ವರ್ಗ ತುಂಬಾ ಸಂತೋಷದಿಂದ ಸ್ವಾಗತಿಸುತ್ತೇವೆ. ಬಿಜೆಪಿ ಸರ್ಕಾರದ ಆಡಳಿತದಿಂದ ಜನರ ಜನಜೀವನ ತೀರ ಸಂಕಷ್ಟದಲ್ಲಿದೆ. ದಿನನಿತ್ಯದ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಗ್ಯಾಸ್ ಸಿಲಿಂಡರ್ ನ ಬೆಲೆ ಗಗನಕ್ಕೆ ಏರಿದೆ. ನಮ್ಮ ಯುವಕ ಯುವತಿಯರು ಯಾವುದೇ […]

ಸರಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಯನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪೂರೈಸುವಂತೆ ವೆರೋನಿಕಾ ಕರ್ನೆಲಿಯೋ ಒತ್ತಾಯ

ಉಡುಪಿ: ಸದಾ ಬೇಟಿ ಬಚಾವೊ ಬೇಟಿ ಪಡಾವೊ ಎನ್ನುವ ಬಿಜೆಪಿ ಸರಕಾರಕ್ಕೆ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆಯಡಿ ನೀಡಲಾಗುವ ಸ್ಯಾನಿಟರಿ ನ್ಯಾಪ್ಕಿನ್ ಪೊರೈಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ವಿಚಾರ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವತಿಯಿಂದ ಶುಚಿ ಯೋಜನೆಯಡಿ ನ್ಯಾಪ್ಕಿನ್ ಖರೀದಿಸಿ ವಿತರಿಸುವ ಜವಾಬ್ದಾರಿ ಹೊತ್ತಿದ್ದು, ಕಳೆದ ಒಂದೂವರೆ ವರ್ಷದಿಂದ ಪೂರೈಸದಿರುವುದು ಸರಕಾರದ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ದೇಶದ ಪ್ರಧಾನಿಯವರು ಮಾತೆತ್ತಿದ್ದರೆ […]

ಸರಕಾರ ಶಾಲಾ ಬಿಸಿಯೂಟಕ್ಕೆ ತೊಗರಿಬೇಳೆ ಪೂರೈಸಲೂ ಪರದಾಡುತ್ತಿರುವುದು ವಿಷಾದನೀಯ: ವೆರೋನಿಕಾ ಕರ್ನೆಲಿಯೋ

ಉಡುಪಿ: 40% ಕಮೀಷನ್ ಪಡೆಯುವ ಭರದಲ್ಲಿ ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ತೊಗರಿ ಬೇಳೆ ಪೊರೈಸಲು ಮರೆತಿರುವ ರಾಜ್ಯ ಸರಕಾರದ ಧೋರಣೆ ನಿಜಕ್ಕೂ ದುರದೃಷ್ಠಕರವಾಗಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಗೂ ಮೊದಲು ಪ್ರತೀ ತಿಂಗಳು ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ತೊಗರಿ ಬೇಳೆ ಪೂರೈಸಲಾಗುತ್ತಿತ್ತು. ಕೋವಿಡ್ ಬಳಿಕ ಮೂರು ತಿಂಗಳಿಗೊಮ್ಮೆ ತೊಗರಿಬೇಳೆಯನ್ನು ಒಂದೇ ಬಾರಿಗೆ ಸರಬರಾಜು ಮಾಡಲಾಗುತ್ತಿತ್ತು. ಕಳೆದ ಸಪ್ಟೆಂಬರ್ ಮೊದಲ ವಾರದಲ್ಲಿ ಶಾಲೆಗಳಿಗೆ ತೊಗರಿಬೇಳೆ ಸರಬರಾಜು ಆಗಿತ್ತು. […]