ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲೇ ಎಲ್ಲೂ ಕಾಣಸಿಗದ ಅತಿ ಅಪರೂಪದ ರಕ್ತದ ಗುಂಪು ಪತ್ತೆ; CRIB ಗುಂಪು ಪತ್ತೆಯಾಗಿದ್ದು ಹೇಗೆ?

ಬೆಂಗಳೂರು: ವಿಶ್ವದಲ್ಲೇ ಎಲ್ಲಿಯೂ ಗುರುತಿಸಲಾಗದ ಅತಿ ಅಪರೂಪದ ರಕ್ತದ ಗುಂಪೊಂದು ಕೋಲಾರ ಮೂಲದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಕೋಲಾರದ ಆಸ್ಪತ್ರೆಯಲ್ಲಿ 38 ವರ್ಷದ ಮಹಿಳೆಯೊಬ್ಬರು ಹೃದಯ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯಲ್ಲಿ ಅತ್ಯಂತ ಅಪರೂಪದ O Rh+ ರಕ್ತದ ಗುಂಪು ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಗಾಗ ವೈದ್ಯರು ಆಕೆಯ ರಕ್ತಕ್ಕೆ ಹೊಂದಿಕೆಯಾಗುವ ರಕ್ತಕ್ಕಾಗಿ ಹುಡುಕಾಟ ಆರಂಭಿಸಿದ್ದರು. O-ಪಾಸಿಟಿವ್ ರಕ್ತ ಸೇರಿದಂತೆ ಯಾವುದೇ ರಕ್ತದ ಗುಂಪಿಗೂ ಈಕೆಯ ರಕ್ತ ಹೊಂದಿಕೆಯಾಗಿಲ್ಲ. ಬಳಿಕ ಆಸ್ಪತ್ರೆಯು ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ರೋಟರಿ […]