ಹಿರಿಯ ನಟ ರಾಕ್ ಲೈನ್ ಸುಧಾಕರ್ ಇನ್ನಿಲ್ಲ
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದರು. ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಿನಿಮಾ ಒಂದರ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ […]