ಉಡುಪಿ ಮೂಲದ ಹಿರಿಯ ನಟಿ ಪ್ರತಿಮಾ ದೇವಿ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಖ್ಯಾತ ನಿರ್ದೇಶಕ, ನಿರ್ಮಾಪಕ ದಿವಂಗತ ಶಂಕರ್ ಸಿಂಗ್ ಅವರ ಪತ್ನಿ ಪ್ರತಿಮಾ ದೇವಿ (88) ಅವರು ಮಂಗಳವಾರ ಮಧ್ಯಾಹ್ನ ನಿಧನ ಹೊಂದಿದರು. ಮೂಲತಃ ಉಡುಪಿಯ ಪ್ರತಿಮಾ ದೇವಿ ಸಣ್ಣಪ್ರಾಯದಲ್ಲೇ ರಂಗಭೂಮಿಗೆ ಹೆಜ್ಜೆ ಇಟ್ಟಿದ್ದರು. ಇವರ ಮೂಲ ಹೆಸರು ಮೋಹಿನಿ.1947ರಲ್ಲಿ ತಮ್ಮ 14ನೇ ವಯಸ್ಸಿನಲ್ಲಿ ಕೃಷ್ಣಲೀಲಾ ಸಿನಿಮಾ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಜಗನ್ಮೋಹಿನಿ ಚಿತ್ರದ ಮುಖಾಂತರ ನಾಯಕಿಯಾಗಿ ಅವರು ಮಿಂಚಿದ್ದರು ಚಂಚಲ ಕುಮಾರಿ, ನಾಗಕನ್ಯಾ, ದಲ್ಲಾಳಿ, ಧರ್ಮಸ್ಥಳ ಮಹಾತ್ಮೆ, […]