ಏಳು ತಿಂಗಳ ಗರ್ಭಿಣಿಯಾಗಿದ್ದ ಪ್ರೊಬೆಷನರಿ ಪಿಎಸ್ ಐ ಕೋವಿಡ್ ಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿ ಶಾಮಿಲಿ (24) ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಬಗ್ಗೆ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. 24 ವರ್ಷದ ಪ್ರೊಬೆಷನರಿ ಪಿಎಸ್ ಐ ಶಾಮಿಲಿ ಮೂಲತಃ ಕೋಲಾರದವರು. ಜನವರಿ 11 ರಂದು ಮಂಗಳೂರು ಎಸ್ ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆ ತೆಗೆದುಕೊಂಡು ತಮ್ಮ […]