ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಶನಿವಾರ (ಜು.19) ಹೃದಯಾಘಾತದಿಂದ ನಿಧನರಾದರು. ಇವರು ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಕಾಣಿಸಿಕೊಂಡಿದ್ದರು. ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ರಂಭೆ, […]