ಮಂಗಳೂರು ಪ್ರವೇಶಿಸಿದ ಶೌರ್ಯ ರಥ ಯಾತ್ರೆ; ನಾಳೆ ಉಡುಪಿಯಲ್ಲಿ ಭವ್ಯ ಸಮಾರೋಪ

ಮಂಗಳೂರು: ಯುವ ಸಂಘಟನೆಬಜರಂಗದಳ ನೇತೃತ್ವದಲ್ಲಿ, ವಿಶ್ವ ಹಿಂದು ಪರಿಷತ್ತಿನ 60ನೇ ವರ್ಷಾಚರಣೆ ಪ್ರಯುಕ್ತ ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆಯು ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಪ್ರವೇಶಿಸಿದ್ದು, ಪುತ್ತೂರು ಮತ್ತು ಬಂಟ್ವಾಳದಲ್ಲಿ ಯಶಸ್ವಿ ಸಮಾವೇಶಗಳನ್ನು ಮುಗಿಸಿ ಇಂದು ಮಂಗಳೂರು ನಗರ ಪ್ರವೇಶಿಸಿದೆ. ನಗರದ ಹೊರವಲಯದ ಅಡ್ಯಾರಿನಲ್ಲಿ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಅಪರಾಹ್ನ ನಗರದಲ್ಲಿ ರಥಯಾತ್ರೆ ನಡೆಯಲಿದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗಿದೆ. ನಗರ […]

ಅ.10 ರಂದು ಬೃಹತ್ ಹಿಂದೂ ಸಮಾಜೋತ್ಸವ: ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗಿ

ಉಡುಪಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆಯ ವತಿಯಿಂದ ಷಷ್ಠಿಪೂರ್ತಿ ಸಮಾರಂಭದ ಅಂಗವಾಗಿ ಅ.10 ರಂದು ಹಿಂದೂ ಸಮಾಜೋತ್ಸವ ಶೌರ್ಯ ಜಾಗರಣ ರಥಯತ್ರೆಯು ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ದೇಶದ ಪ್ರಖರ ಹಿಂದೂ ವಾಗ್ಮಿ ಭಾಗೇಶ್ವರ ಧಾಮ ಸರ್ಕಾರ್ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಭಾಗವಹಿಸಲಿದ್ದಾರೆ.

ಅಮರನಾಥದಲ್ಲಿ ವಿಹಿಂಪ ಹಾಗೂ ಬಜರಂಗದಳದಿಂದ ಸೌಜನ್ಯಳಿಗಾಗಿ ಪ್ರಾರ್ಥನೆ

ಶ್ರೀನಗರ: ಬೆಳ್ತಂಗಡಿಯ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುತ್ತೂರಿನ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ವತಿಯಿಂದ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]

ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಜಿಲ್ಲಾ ಬಿಜೆಪಿಯಿಂದ ಬೆಂಬಲ: ಕುಯಿಲಾಡಿ

ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, […]