ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ಸೆಪ್ಟೆಂಬರ್ 21ರಿಂದ 30ರ ವರೆಗೆ ಮಳೆಗಾಲದ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಸಚಿವ ಸಂಪುಟ ಬಳಿಕ ಮಾತನಾಡಿದ ಅವರು, ಅಧಿವೇಶ ಎಲ್ಲಿ ನಡೆಸಬೇಕೆಂಬ ನಿರ್ಧಾರ ಆಗಿಲ್ಲ. ಸ್ವೀಕರ್ ಜತೆಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.