ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಸಭಾತ್ಯಾಗ ನಡೆಸಿದ ಬಿಜೆಪಿ; ಪಾಕ್ ಪರ ಘೋಷಣೆ ವಿರುದ್ದ ಪ್ರತಿಭಟನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಧರಣಿ ನಡೆಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸದನ ಆರಂಭ ಆಗುತ್ತಿದ್ದಂತೆಯೆ ಬಾವಿಗೆ ಇಳಿದು ಧರಣಿ ನಡೆಸಿದ ಬಿಜೆಪಿ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಜೈಶ್ರೀರಾಂ, ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಸಿಎಂ ಉತ್ತರಕ್ಕೆ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿಎಂ ರಾಜೀನಾಮೆ ಕೊಡಬೇಕು. ಇದು ಹಿಂದೂ ವಿರೋಧಿ […]