ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ: ರಾಜ್ಯಕ್ಕೆ ಪ್ರಥಮ ರ್‍ಯಾಂಕ್

ಉಡುಪಿ: ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜು ದ್ವಿತೀಯ ಪಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ 285 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 190 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 94 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 168 ಮಂದಿ ಪರೀಕ್ಷೆ ಬರೆದಿದ್ದು, 72 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 92 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಜ್ಯ ಮಟ್ಟದಲ್ಲಿ ವಿದ್ಯೋದಯದ ಅಪೂರ್ವ ಸಾಧನೆ ಉಡುಪಿ ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ […]