ವಿಟಿಯು ಫೆಸ್ಟ್: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ತೃತೀಯ ಸ್ಥಾನ

ವಿದ್ಯಾಗಿರಿ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಆತಿಥ್ಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ 24ನೇ ಅಂತರ ಕಾಲೇಜು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದರು. ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿಯನ್ನು ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯ ದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ […]