ಇಂದ್ರಧನುಷ್ ಲಸಿಕಾ ಕಾರ್ಯಕ್ರಮದಲ್ಲಿ ಶೇ.100 ಪ್ರಗತಿ ಸಾಧನೆ ಗುರಿ: ಡಾ.ವಿದ್ಯಾಕುಮಾರಿ ಕೆ.

ಉಡುಪಿ: ಇಂದ್ರಧನುಷ್ ಅಭಿಯಾನದಡಿ ನೀಡುತ್ತಿರುವ ಲಸಿಕಾಕರಣಗಳಿಂದ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಮೊದಲನೇ ಹಂತದಲ್ಲಿ 3,212 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಿದ್ದು, 3,203 ಮಕ್ಕಳಿಗೆ ಲಸಿಕೆ ನೀಡಿ, ಶೇ. 99.72 ರಷ್ಟು, 708 ಗರ್ಭಿಣಿ ಮಹಿಳೆಯರಿಗೆ ಲಸಿಕೆ ನೀಡಲು ಗುರಿ ಹೊಂದಿ 708 ಜನರಿಗೂ ಲಸಿಕೆ ನೀಡಿ ಶೇ. 100 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ […]
ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಬೈಂದೂರು: ಬೈಂದೂರು ತಾಲೂಕು ನಾವುಂದದಲ್ಲಿ ತೀವ್ರ ಮಳೆಯಿಂದ ನೆರೆ ಪೀಡಿತವಾಗಿರುವ ಪ್ರದೇಶ ಮತ್ತು ನಿರೋಡಿಯಲ್ಲಿ ಸೇತುವೆಗೆ ಹಾನಿಯಾದ ಪ್ರದೇಶ ಹಾಗೂ ಕುಂದಾಪುರದ ತೆಕ್ಕಟ್ಟೆಯಲ್ಲಿರುವ ಸೈಕ್ಲೋನ್ ಶೆಲ್ಟರ್‌ಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನೆರೆ ಬಾಧಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.
ಮಣಿಪಾಲ: ಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಜುಲೈ 17 ರಂದು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಮಾರಂಭವನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಇಂತಹ ಅದ್ಭುತ ಕೊಡುಗೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ […]
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ನೇಮಕ

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐ.ಎ.ಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಳ್ಳಾಲ ತಾಲೂಕಿನ ಹಾವೂರು ಗ್ರಾಮದ ವಿದ್ಯಾಕುಮಾರಿ 2014 ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ಅವರನ್ನು ನೇಮಿಸಲಾಗಿದೆ. ಕೂರ್ಮಾ ರಾವ್ ಎಂ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.