ಸಾಮಾಜಿಕ ಜಾಲತಾಣದಲ್ಲಿ ಹೃದಯ ಗೆದ್ದಿತು ಈ ಯುವಕನ ಬಣ್ಣದ ಲೋಕ: ಬಡತನದ ನಡುವೆ ಅರಳಿತು ಶ್ರೀಮಂತ ಚಿತ್ರಕಲೆ!

ಸೌಂದರ್ಯ ಎಲ್ಲರ ಕಣ್ಣನ್ನು ಗೆಲ್ಲುತ್ತೆ. ಪ್ರತಿಭೆ ಎಲ್ಲರ ಹೃದಯವನ್ನು ಗೆಲ್ಲುತ್ತೆ” ಎಂಬ ಮಾತಿದೆ. ಬಡವನೇ ಇರಲಿ, ಶ್ರೀಮಂತನೇ ಆಗಲಿ ಯಾರಲ್ಲಿ ಕಲಾಭಿವ್ಯಕ್ತಿತ್ವ ಇರುತ್ತೋ ಅಂತಹ ಪ್ರತಿಭೆಯನ್ನು ಸಮಾಜ ಗುರುತಿಸಿಯೇ ಗುರುತಿಸುತ್ತೆ. ಆ ಸಾಲಿಗೆ ವಿದ್ಯಾನಂದ (ವಿಘ್ನೇಶ್ ಕೆ.ಎಸ್) ಎಂಬ ಚಿತ್ರಕಲಾ ಪ್ರತಿಭೆ ಹೊರತಲ್ಲ ಮನೆಯೊಳಗೆ ಕಡುಬಡತನದ ಬೇಗೆ ಇದ್ದರೂ ತನ್ನ ಕೈಚಳಕದಿಂದ ಮೂಡಿ ಬರುತ್ತಿರುವ ಈತನ ಚಿತ್ರಕಲೆಗೆ ಯಾವುದೇ ಬೇಗೆ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ತಾನು ಬಿಡಿಸಿದ ಕಲಾಚಿತ್ರಗಳನ್ನು ಹರಿಯಬಿಟ್ಟು. ಅಪಾರ ಕಲಾಭಿಮಾನಿಗಳ ಮೆಚ್ಚುಗೆಯನ್ನು ಸಂಪಾದಿಸಿದ್ದಾನೆ. ವಿಘ್ನೇಶ್. […]