ಮಾ.13 ರಿಂದ 15ರ ವರೆಗೆ ಜಿಲ್ಲೆಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರಿಂದ ಚಾಲನೆಗೊಂಡು ರಾಜ್ಯದಾದ್ಯಂತ ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ ಮಾ.13 ರಿಂದ 15ರ ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ನೆರವೇರಲಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಾರ್ಚ್ 13, ಮಧ್ಯಾಹ್ನ 3.30ಕ್ಕೆ […]