ವಿಜಯಪುರದಲ್ಲಿ ಐದು ದಿನ ಮಳೆ ಮುಂದುವರಿಕೆ ಕೊನೆಗೂ ಜಿಲ್ಲೆಗೆ ಮುಂಗಾರು ಆರಂಭ

ವಿಜಯಪುರ: ಸದ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ ಮಂಗಳವಾರ ಬೆಳಗ್ಗೆ 8-30ರಿಂದ ಸಂಜೆ 5-30ರವರೆಗೆ 5.2 ಮಿ,ಮೀ ಮಳೆ ದಾಖಲಾಗಿದೆ. ಇನ್ನೂ ಐದು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಕೊನೆಗೂ ಒಂದೂವರೆ ತಿಂಗಳ ನಂತರ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಮಂಗಳವಾರ ದಿನವಿಡಿ ಜಿಟಿ ಜಿಟಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಇನ್ನೂ ಐದು ದಿನ ಇದೇ ರೀತಿ ಮಳೆ ಇರಲಿದೆ. […]