ವಿಜಯಪುರ: ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಕೋಟಿಗಟ್ಟಲೇ ಲೂಟಿ!

ವಿಜಯಪುರ: ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಅಂದಾಜು ₹8 ಕೋಟಿ ನಗದು, 50 ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ […]