ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?.: ಇಬ್ಬರು ಮುಖಂಡರ ಉಚ್ಚಾಟನೆಗೂ ಪಟ್ಟು.!

ನವದೆಹಲಿ: ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದಾದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತಮಗೆ ಕೊಡಬೇಕು ಎಂದು ಹಾಲಿ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಜಯೇಂದ್ರ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಂತಹ ವೇಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಈ ಬೇಡಿಕೆ ಸಲ್ಲಿಸಿದ್ದರು. ಇದರ ಜತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಯೋಗೇಶ್ವರ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ […]