ಗಂಗೊಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಗಂಗೊಳ್ಳಿ :  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅದ್ಭುತ ಸಾಧನೆ ಮಾಡಿದೆ. ಬಿಜೆಪಿಯನ್ನು ಒಂದಂಕಿಗೆ ತಂದು ನಿಲ್ಲಿಸುವುದಾಗಿ ಹೇಳುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಂದೆಂದೂ ಕಂಡರಿಯದ ಸೋಲನ್ನು ಅನುಭವಿಸಿ ಒಂದಂಕಿಗೆ ಬಂದು ನಿಂತಿವೆ ಎಂದು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿದ ಹಿನ್ನಲೆಯಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಮುಂಭಾಗ ಮತ್ತು ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಗುರುವಾರ ಸಂಜೆ ಜರಗಿದ ಬಿಜೆಪಿ ಕಾರ್ಯಕರ್ತರ […]

ತ್ರಾಸಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ತ್ರಾಸಿ ಬಸ್ ನಿಲ್ದಾಣ ಮತ್ತು ತ್ರಾಸಿ ಬೀಚ್‍ನಲ್ಲಿ ಬಿಜೆಪಿ ವಿಜಯೋತ್ಸವ ಆಚರಣೆ

ಗಂಗೊಳ್ಳಿ : ರಾಜ್ಯದ ಆಡಳಿತ ವಿರೋಧಿ ಸರಕಾರದ ವಿರುದ್ಧ ಜನತೆ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಉತ್ತರ ನೀಡಿದ್ದಾರೆ. ಕರಾವಳಿ ಭಾಗದ ಜನರನ್ನು ಮತ್ತು ಮೀನುಗಾರಿಕೆಯನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವ ಈ ಭ್ರಷ್ಟ ಸಮ್ಮಿಶ್ರ ಸರಕಾರಕ್ಕೆ ಕರಾವಳಿಯ ಜನತೆ ಮತ್ತೊಮ್ಮೆ ಪಾಠ ಕಲಿಸಿದ್ದಾರೆ. ಬಿಜೆಪಿಯನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಬೀಗುತ್ತಿದ್ದ ಮೈತ್ರಿ ಪಕ್ಷದವನ್ನು ಮತದಾರರು ಒಂದಂಕಿಗೆ ಇಳಿಸಿ ಮೈತ್ರಿ ಸರಕಾರದ ಮುಖಂಡರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತ ನಡೆಸುವುದು ನಿಶ್ಚಿತ ಎಂದು ತ್ರಾಸಿ […]