ವಿಲ್ಲೇಜ್ ಲೈಫ್ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಉಡುಪಿ: ತ್ರಿವರ್ಣ ಆರ್ಟ್ ಸೆಂಟರ್ ಆಶ್ರಯದಲ್ಲಿ ಮಣಿಪಾಲ ಮತ್ತು ಕುಂದಾಪುರ ತ್ರಿವರ್ಣ ಕಲಾ ಕೇಂದ್ರದ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಮಣಿಪಾಲ ಗೀತಾಮಂದಿರದಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ವಿಲ್ಲೇಜ್ ಲೈಫ್’ ಚಿತ್ರಕಲಾ ಪ್ರದರ್ಶನಕ್ಕೆ ಅಂಬಲಪಾಡಿ ದೇಗುಲದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಶನಿವಾರ ಚಾಲನೆ ನೀಡಿದರು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ. ಎಚ್. ಶಾಂತಾರಾಮ್ ಮಾತನಾಡಿ, ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆ, ಆಟಗಳನ್ನು ಗುರುತಿಸಿಕೊಳ್ಳಲು ಚಿತ್ರಕಲಾ ಪ್ರದರ್ಶನ ಸಹಕಾರಿಯಾಗಿದೆ. ಗ್ರಾಮಗಳು ನಗರಗಳಾಗಿ ಪರಿವರ್ತನೆಯಾಗುತ್ತಿರುವ ಈ […]