ಕಂದಾಯ ಸಚಿವರ ಗ್ರಾಮ ವಾಸ್ತವ್ಯ: 1000 ಕ್ಕೂ ಅಧಿಕ ಮಂದಿಗೆ ಸವಲತ್ತು ವಿತರಣೆ

ಉಡುಪಿ: ಫೆ.19 ರಂದು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮದಲ್ಲಿ ನಡೆಯುವ ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರ ಜನಸ್ಪಂದನ ಕಾರ್ಯಕ್ರಮದಲ್ಲಿ 1000 ಕ್ಕೂ ಅಧಿಕ ಮಂದಿಗೆ ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ವಿತರಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ಕೊಕ್ಕರ್ಣೆಯ ಕೆಪಿಎಸ್ ಶಾಲೆಯಲ್ಲಿ, ಕಂದಾಯ ಸಚಿವರ ಜನಸ್ಪಂದನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಕೈಗೊಂಡಿರುವ ಸಿದ್ಧತೆಗಳ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಂದಾಯ ಸಚಿವರು ಫೆಬ್ರವರಿ 19 ರಂದು […]