ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ

ಉಡುಪಿ: ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ. ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ 40 ವರ್ಷಗಳ ಕಾಲ‌ ರಾಜಕೀಯ ಮಾಡಿ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ‌ ಸಮಾಜ ಇದೆ ಎಂದು ಜಗದ್ಗುರು ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಹೇಳಿದರು. ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ […]

ಅಧಿಕಾರಕ್ಕೆ ಬಂದರೆ 94 ಸಿ ಅರ್ಜಿಗಳಿಗೆ ಮರುಜೀವ: ವಿನಯ್ ಕುಮಾರ್ ಸೊರಕೆ

ಉಡುಪಿ: ಶಾಸಕನಾಗಿದ್ದ ಕಾಲದಲ್ಲಿ ಶಿಫಾರಸು ಮಾಡಿದ್ದ 94 ಸಿ ಅರ್ಜಿಗಳು ಗೆದ್ದಲು ಹಿಡಿದಿದ್ದು ಅವುಗಳಿಗೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡಲಾಗುವುದು. 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಗಳನ್ನು ಶಿಫಾರಸು ಮಾಡಿದ್ದರೂ ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ ಎಂದು ಕಾಪು ವಿಧನಾಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಮೇ.1 ರಂದು ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಸ್ತೆ […]

ಕಾಮಗಾರಿಗೆ ಪಿಕ್ಕಾಸು ಬೀಳಬೇಕಾದ್ರೆ ಮೊದಲು 40% ಕಮಿಷನ್ ಕೊಡಬೇಕು: ಬಿಜೆಪಿ ಸರಕಾರದ ವಿರುದ್ಧ ಸೊರಕೆ ವಾಗ್ದಾಳಿ

ಉಡುಪಿ: ರಸ್ತೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ಆಗಬೇಕಾದ್ರೆ ಮೊದಲು 40 ಪರ್ಸೆಂಟ್ ಕಮಿಷನ್ ಪಾವತಿಸಬೇಕು. ಆದಾದ ಬಳಿಕವೇ ಕಾಮಗಾರಿಗೆ ಪಿಕ್ಕಾಸು ಬೀಳುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು. ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಆತ್ರಾಡಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವುದೇ ಸರಕಾರಿ ಕಚೇರಿಗಳಿಗೆ ಹೋಗಬೇಕಾದರೂ ದಲ್ಲಾಳಿಗಳ ಮೂಲಕವೇ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ‌. ಉತ್ಸವಗಳನ್ನು ಮಾಡುವ ಮೂಲಕ ಜನರ ತೆರಿಗೆಯ […]

ಹೆಬ್ರಿ: ಅಕ್ರಮ ಕಟ್ಟಡ ತೆರವಿಗೆ ಆದೇಶ ಕಾಂಗ್ರೆಸ್ ಹೋರಾಟಕ್ಕೆ ಸಂದ ಜಯ: ವಿನಯ್ ಕುಮಾರ್ ಸೊರಕೆ

ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೇಗಾರ್, ತಮ್ಮ ಅಧಿಕಾರ ದುರುಪಯೋಗ ಪಡಿಸಿ, ತನ್ನ ಸಹೋದರರಾದ ಪದ್ಮನಾಭ ಸೇರ್ವೆಗಾರ್ ಮತ್ತು ಸುರೇಶ್ ಸೇರ್ವೇಗಾರ್ ಎಂಬವರಿಗೆ, ಪೆರ್ಡೂರು ಗ್ರಾಮದ ಸ.ನಂ. 296 ರಲ್ಲಿ, 0.15 ಎಕ್ರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಅನಧಿಕೃತವಾಗಿ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿರುವುದನ್ನು ಆಕ್ಷೇಪಿಸಿ, ಕಾಂಗ್ರೆಸ್ ಪಕ್ಷದ ವತಿಯಿಂದ ತೀವ್ರವಾದ ಪ್ರತಿಭಟನೆಯನ್ನು ಕೈಗೊಂಡು ತಾಲೂಕು ದಂಡಾಧಿಕಾರಿಗಳಿಗೆ ದೂರು ಸಲ್ಲಿಸಿ ಒತ್ತುವರಿ ಮಾಡಿಕೊಂಡು ನಿರ್ಮಿಸಿದ ಅಕ್ರಮ ಕಟ್ಟಡವನ್ನು ಅನಧಿಕೃತಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ […]

ನ.10 ರಂದು ಕಾಂಗ್ರೆಸ್ ನ ವಿವಿಧ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಆಶ್ರಯದಲ್ಲಿ ವಿವಿಧ ಮುಂಚೂಣಿ ಘಟಕಗಳಾದ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಇಂಟಕ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಆರ್.ಜಿ.ಪಿ.ಆರ್.ಎಸ್ ಸಮಿತಿ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ.10 ರಂದು ಸುರಭಿ ಹಾಲ್, ಕೊಟ್ನಕಟ್ಟೆಯಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ-ಕಿರಿಯ ನಾಯಕರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ವಿವಿಧ ಸ್ತರದ […]