ಅಗಲಿದ ಕಲಾವಿದ ವಿನಯ ಆಚಾರ್ಯ ಕುಟುಂಬಕ್ಕೆ ಸಹಾಯಧನ ವಿತರಣೆ

ಮಂಗಳೂರು: ಇತ್ತೀಚೆಗೆ ನಿಧನರಾದ ಯುವ ಯಕ್ಷಗಾನ ಕಲಾವಿದ ಕಡಬ ವಿನಯ ಆಚಾರ್ಯ ಅವರ ಮಾತೃಶ್ರೀಯವರಾದ ಸುಲೋಚನಾ ಆಚಾರ್ಯ ಅವರಿಗೆ ಉಡುಪಿ ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ 50 ಸಾವಿರ ರೂಪಾಯಿಯ ಚೆಕ್‌ನ್ನು ವಿತರಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಅವರ ನೇತೃತ್ವದಲ್ಲಿ ಯಕ್ಷಗಾನ ಕಲಾರಂಗದ ತಂಡವು ವಾಮದಪದವಿನ ಕಡಬ ವಿನಯ ಆಚಾರ್ಯ ಅವರ ಮನೆಗೆ ಭೇಟಿ ನೀಡಿ ಪ್ರತಿಭಾವಂತ ಯುವ ಕಲಾವಿದನ ಅಕಾಲಿಕ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿತು. […]