ವಿದ್ಯಾರ್ಥಿಗಳು ಬಡ ಸಹಪಾಠಿಗೆ ನೆರವು‌ ನೀಡುವ ಮನೋಧರ್ಮ ಬೆಳೆಸಿಕೊಳ್ಳಬೇಕು: ವಿನಯ ಗುರೂಜಿ 

ಉಡುಪಿ: ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದ ಜತೆಗೆ ದೇಶದ ಬಗ್ಗೆಯೂ ಚಿಂತನೆ ಮಾಡಬೇಕು.‌ ಜತೆಗೆ ಬಡ ಸಹಪಾಠಿಗೆ ನೆರವು ಒದಗಿಸುವ ಮನೋಧರ್ಮವನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಬೆಳೆಸಿಕೊಳ್ಳಬೇಕು ಎಂದು ಶೃಂಗೇರಿ ಗೌರಿಗದ್ದೆಯ ಸ್ವರ್ಣ ಪೀಠಿಕಪುರ ದತ್ತಾಶ್ರಮದ ವಿನಯ ಗುರೂಜಿ ಹೇಳಿದರು. ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಸ್ತುತ ಸಾಲಿನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಬೆನ್ನೆಲುಬು. ವಿದ್ಯಾರ್ಥಿ ಶಕ್ತಿಗಿಂತ […]