ಕಳತ್ತೂರು: ಕಾಂಗ್ರೆಸ್ ವಾರ್ಡ್ ಕಾರ್ಯಕರ್ತರ ಸಭೆ

ಕಳತ್ತೂರು: ಕುತ್ಯಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕಳತ್ತೂರು 2ನೇ ವಾರ್ಡಿನ ಕಾರ್ಯಕರ್ತರ ಸಭೆಯು ಚಂದ್ರನಗರ ಬಟರ್ ಫ್ಲೈ ಗೆಸ್ಟ್ ಹೌಸ್ ಪಾರ್ಟಿಹಾಲ್ ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಹೆಸರನ್ನು ಮತ ಪಟ್ಟಿಯಿಂದ ತೆಗೆದು ಹಾಕುವ ಹುನ್ನಾರವಿದ್ದು ಕಾರ್ಯಕರ್ತರನ್ನು ತಮ್ಮ ಹಕ್ಕಿನಿಂದ ವಂಚಿಸಲು ನೋಡಲಾಗುತ್ತಿದೆ. ಇದಕ್ಕೆ ಬಿಜೆಪಿ […]
ಮೈತ್ರಿ ಸರಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ: ವಿನಯ ಕುಮಾರ್ ಸೊರಕೆ

ಉಡುಪಿ: ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಲು ಬಿಜೆಪಿ ಎಲ್ಲ ರೀತಿಯಿಂದಲೂ ಪ್ರಯತ್ನಿಸುತ್ತಿದೆ. ರಾಜ್ಯ ಮೈತ್ರಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ಮಾಡುತ್ತಿದ್ದು, ಇದರಲ್ಲಿ ಕರ್ನಾಟಕದ ರಾಜ್ಯಪಾಲರು ಸೇರಿ ಕೊಂಡಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಹಣದ ಆಮಿಷವೊಡ್ಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಹಮ್ಮಿಕೊಂಡ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. […]