ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ ಹಣದ ಕಟ್ಟು ವಾಪಸ್ ಎಸೆತ: ಹಣ ಬೇಡ, ಸಮಾಜದಲ್ಲಿ ಶಾಂತಿ ಬೇಕು ಎಂದ ಮಹಿಳೆ

ಕೆರೂರು: ಬಾಗಲಕೋಟೆಯ ಕೆರೂರಿನಲ್ಲಿ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ನಾಲ್ವರಲ್ಲಿ ಒಬ್ಬರ ಕುಟುಂಬದ ಸದಸ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ 2 ಲಕ್ಷ ರೂ. ಗಳ ಹಣದ ಕಟ್ಟನ್ನು ಅವರ ಕಾರಿನ ಮೇಲೆ ವಾಪಸ್ ಎಸೆದಿದ್ದಾರೆ. ಇಷ್ಟು ದಿನ ಕಳೆದರೂ ಯಾವೊಬ್ಬ ನಾಯಕನೂ ಭೇಟಿಗೆ ಬಾರದಿರುವುದಕ್ಕೆ ಗಾಯಾಳುಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. #WATCH | Karnataka: A woman, whose husband was injured in recent Kerur violence, threw the money that was […]

ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ: ಶೀಘ್ರ ಸ್ಪಂದಿಸಿ ನ್ಯಾಯ ಒದಗಿಸಿ ಎಂದ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯಗಳ ಬಗ್ಗೆ ಮಾಹಿತಿ ಅಥವಾ ದೂರುಗಳು ಬಂದಲ್ಲಿ ಅವುಗಳಿಗೆ ಕೂಡಲೇ ಸ್ಪಂದಿಸಿ, ಪೀಡಿತರಿಗೆ ಆತ್ಮಸ್ಥೈರ್ಯ ತುಂಬಿ, ಸಾಂತ್ವನ ಹೇಳುವುದರ ಜೊತೆಗೆ ಕಾನೂನು ನೆರವನ್ನು ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ […]