ವಿಶಾಲ ಗಾಣಿಗ ಕೊಲೆ ಪ್ರಕರಣ: ಪತಿ ಸಹಿತ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಮ್ರಗೋಡಿನ ಫ್ಲಾಟ್‌ನಲ್ಲಿ ಜುಲೈ 12ರಂದು ನಡೆದ ವಿಶಾಲ ಗಾಣಿಗ(35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ವಿಶಾಲ ಗಾಣಿಗರ ಪತಿ ಬೀಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೆ ಸುಪಾರಿ ನೀಡಿದ್ದ ಪತಿ: ವಿಶಾಲ ಗಾಣಿಗ ಹಾಗೂ ಆಕೆಯ ಪತಿ‌ ರಾಮಕೃಷ್ಣ ಮಧ್ಯೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತನ್ನ […]