ಆ.5 ರಿಂದ ಪ್ರತೀ ಮನೆ ಮನಗಳಲ್ಲಿ ಶ್ರೀರಾಮ – ಹನುಮರ ಭಕ್ತಿ ಉಕ್ಕಲಿ: ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು

ಉಡುಪಿ: ಆಗಸ್ಟ್ 5 ರಂದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಈ ಧರ್ಮಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸುವವರಿದ್ದಾರೆ . ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಧರ್ಮಶ್ರದ್ಧೆಯುಳ್ಳ ಮನೆ ಮನಸ್ಸುಗಳಲ್ಲಿ ಶ್ರೀ ರಾಮ- ಶ್ರೀ ಹನುಮರ ಭಕ್ತಿಗಳು ನ್ಯಾಸಗೊಳ್ಳಬೇಕು ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವಿಶ್ವಸ್ಥಮಂಡಳಿ ಸದಸ್ಯರಾದ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ. ಆಗಸ್ಟ್ 5 ನೇ ದಿನಾಂಕ ಈ ದೇಶದ ಇತಿಹಾಸದಲ್ಲಿ ಸ್ಮರಣೀಯ ದಿನವಾಗಿ […]