ಶಿರೂರು ಮಠಕ್ಕೆ ಯೋಗ್ಯ ಶಿಷ್ಯ ಸಿಗಲಿದ್ದಾನೆ : ವಿಶ್ವವಲ್ಲಭ ಸ್ವಾಮೀಜಿ

ಉಡುಪಿ:ಶಿರೂರು ಮಠಕ್ಕೆ ಯೋಗ್ಯ ಶಿಷ್ಯನನ್ನು ನೋಡಿ ಇಟ್ಟಿದ್ದೇವೆ. ಆತನಿಗೆ ಸಂನ್ಯಾಸ ಸ್ವೀಕರಿಸುವ ಎಲ್ಲ ಅರ್ಹತೆಗಳಿವೆ. ಆದರೂ ಈಗಲೇ ಎಲ್ಲವನ್ನೂ ತೀರ್ಮಾನಿಸಲು ಆಗಲ್ಲ. ಈಗಲೇ ಆತನ ಹೆಸರನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಹೇಳಿದರು. ಉಡುಪಿ ಶಿರೂರು ಮಠದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಶಿಷ್ಯನಾಗಲು ಅರ್ಹತೆಯುಳ್ಳವನು ಈಗಾಗಲೇ ಸೋದೆ ಮಠದ ಗುರುಕುಲದಲ್ಲಿ ಅಧ್ಯಯನ ಮಾಡುತ್ತಿದ್ದು, ಮೂರು ವರ್ಷ ಕಾಲ ಆತನ ಚಟುವಟಿಕೆಗಳನ್ನು ಗಮನಿಸುತ್ತೇವೆ. ಸಂನ್ಯಾಸ ಸ್ವೀಕರಿಸಲು ಯೋಗ್ಯರೆಂದು ಮನಗಂಡ ಮೇಲೆ ಉತ್ತರಾಧಿಕಾರಿಯನ್ನಾಗಿ […]