ಗುಳ್ಳದ ಬೀಜದ ಮಹತ್ವದ ಬಗ್ಗೆ ಸಂಶೋಧನೆ ಅಗತ್ಯವಿದೆ: ವಿಶ್ವವಲ್ಲಭ ಶ್ರೀ

ಉಡುಪಿ: ಎಲ್ಲ ತರಕಾರಿ ಬೆಳೆಗಳಿಗಿಂತ ಮಟ್ಟುಗುಳ್ಳ ಭಿನ್ನವಾಗಿದ್ದು, ಮಟ್ಟುವಿನ ಮಣ್ಣಿನ ಗುಣ, ಗುಳ್ಳದ ಬೀಜದ ಮಹತ್ವದ ಬಗ್ಗೆ ಸಂಶೋಧನೆ ಮಾಡಬೇಕಾದ ಅಗತ್ಯವಿದೆ ಎಂದು ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಹೇಳಿದರು. ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಮಟ್ಟುಗುಳ್ಳ ಕೃಷಿಯ ಸುಸ್ಥಿರ ಅಭಿವೃದ್ಧಿ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲ ಖಾದ್ಯಪ್ರಿಯರಿಗೆ ಮಟ್ಟುಗುಳ್ಳದ ಪರಿಚಯವಿದೆ. ಮಟ್ಟುಗುಳ್ಳ ಎಂಬ ತರಕಾರಿ ಇಂದು ಜಗತ್ತಿನಾದ್ಯಂತ ಪಸರಿಸಿ ಮಟ್ಟುಗ್ರಾಮದ ಹೆಸರನ್ನು ಗುರುತಿಸುವಂತೆ ಮಾಡಿದೆ. ಇದಕ್ಕೆ ಗುಳ್ಳದ ಬೀಜ […]