ವಿಶ್ವಕರ್ಮ ಸಮುದಾಯಕ್ಕೆ 300 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿ: ವಿಶ್ವಕರ್ಮ ಮಹಾಸಭಾ ಆಗ್ರಹ

ಉಡುಪಿ: ನೇಕಾರರು, ಮೀನುಗಾರರ ಸಾಲ ಮನ್ನಾ ಮಾಡಿದಂತೆ ಅತೀ ಶೀಘ್ರವಾಗಿ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಬೇಕು. ಕೊರೊನಾದಿಂದಾಗಿ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ವಿಶ್ವಕರ್ಮ ಸಮುದಾಯಕ್ಕೆ ತುರ್ತಾಗಿ 300 ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಉಡುಪಿ ಜಿಲ್ಲಾ ವಿಶ್ವಕರ್ಮ ಮಹಾಸಭಾದ ಮುಖಂಡ ನೇರಂಬಳ್ಳಿ ರಮೇಶ್ ಆಚಾರ್ಯ ಆಗ್ರಹಿಸಿದರು. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊರೊನಾ ಸಮಸ್ಯೆಯಿಂದಾಗಿ ಸಮುದಾಯದ ಪರಿಸ್ಥಿತಿ ಮತ್ತಷ್ಟು ಶೋಚನೀಯ ಸ್ಥಿತಿಗೆ ತಲುಪಿದೆ. ಕಳೆದ ಆರೇಳು ವರ್ಷದಲ್ಲಿ […]