ಕಲೆ ಮತ್ತು ವಾಸ್ತು ಶಿಲ್ಪಕ್ಕೆ ವಿಶ್ವಕರ್ಮರು ಮೂಲಪುರುಷರು: ರಘುಪತಿ ಭಟ್

ಉಡುಪಿ: ವಿಶ್ವಕರ್ಮರು ಪ್ರಾತಃಸ್ಮರಣೀಯರಾಗಿದ್ದು, ಅವರಿಂದಾಗಿ ವಿಶ್ವದಲ್ಲಿ ಕಲೆ ಮತ್ತು ವಾಸ್ತುಶಿಲ್ಪ ಆರಂಭಗೊಂಡಿದೆ. ಪುರಾಣಗಳಲ್ಲಿ ಉಲ್ಲೇಖಿಸಿದಂತೆ ಪ್ರಸಿದ್ಧ ಕ್ಷೇತ್ರಗಳು, ವಾಸ್ತುಶಿಲ್ಪ ಕಲೆಗಳು, ವಿಶ್ವಕರ್ಮರಿಂದ ರಚಿತವಾಗಿದ್ದು, ಸುಪ್ರಸಿದ್ಧ ದ್ವಾರಕ ನಗರವು ಇವರ ಸೃಷ್ಟಿಗಳಲ್ಲೊಂದಾಗಿದ್ದು, ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಇವರೇ ಮೂಲ ಪುರುಷರು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ […]

ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಭಾನುವಾರದಂದು ಕೋಟಾ ಕ್ಕೆ ಆಗಮನ

ಉಡುಪಿ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ) ರಾಜ್ಯಾಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ಜೂನ್ 12 ರಂದು ಭಾನುವಾರ ಬೆಳಿಗ್ಗೆ 9.30 ಗಂಟೆಗೆ ಕೋಟಕ್ಕೆ ಆಗಮಿಸಲಿದ್ದಾರೆ. ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕೋಟ ಹೋಬಳಿಯ ಯುವ ಘಟಕ ಉದ್ಘಾಟನೆ, ವಿಶ್ವಕರ್ಮ ಸಮಾಜದ ವಿವಿಧ ಕ್ಷೇತ್ರಗಳ‌ ಸಾಧಕರ ಸನ್ಮಾನ, ಎಸ್.ಎಸ್.ಎಲ್.ಸಿ ಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಯುವಘಟಕಾಧ್ಯಕ್ಷ ಶ್ರೀನಿವಾಸ ಮಳವಳ್ಳಿ ಉಪಸ್ಥಿತರಿರಲಿದ್ದಾರೆ. […]