ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ; ಶ್ರೀಗಳೇ ನೆಟ್ಟ ಸಸಿಗಳಿಗೆ ಆವರಣಗೋಡೆ ಕಟ್ಟಿ ಲೋಕಾರ್ಪಣೆ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಪುಣ್ಯತಿಥಿ ದಿನವಾದ ಇಂದು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಶಿಲಾ ವೃಂದಾವನ ಪ್ರತಿಷ್ಠಾ ಪೂರ್ವಕ ಆರಾಧನೋತ್ಸವ ನಡೆದರೆ, ಉಡುಪಿ ಸಹಿತ ದೇಶದ ವಿವಿಧೆಡೆ ಇರುವ ಪೇಜಾವರ ಮಠದ ಶಾಖೆಗಳಲ್ಲೂ ಶ್ರೀಗಳ ಸಂಸ್ಮರಣೋತ್ಸವವು ನಡೆಯಿತು. ಉಡುಪಿಯಲ್ಲಿ ಶ್ರೀಗಳ ಸಂಸ್ಮರಣೆಯ ವಿಶೇಷ ಕಾರ್ಯಕ್ರಮವೊಂದು ನಡೆದಿದೆ ಸ್ಥಳೀಯ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಕೊಡವೂರು ಶಂಕರನಾರಾಯಣ ದೇವಸ್ಥಾನ, ಪಾಜಕದ ಆನಂದತೀರ್ಥ ವಿದ್ಯಾಲಯಗಳಲ್ಲಿ ಶ್ರೀ ವಿಶ್ವೇಶತೀರ್ಥರು ವಿವಿಧ […]