ಶಿಕ್ಷಣ, ಆರೋಗ್ಯ ಮತ್ತು ಆದಾಯದ ಅಂಶಗಳು ನೈಜ ಅಭಿವೃದ್ದಿಗೆ ಮಾಪಕ: ಎಸ್. ಜನಾರ್ದನ ಮರವಂತೆ

ಬೈಂದೂರು: ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದೇ ಅಭಿವೃದ್ಧಿ ಎಂಬ ಕಲ್ಪನೆ ನಮ್ಮಲ್ಲಿದೆ. ಆದರೆ ಶಿಕ್ಷಣ, ಆರೋಗ್ಯ ಮತ್ತು ತಲಾ ಆದಾಯದ ಅಂಶಗಳನ್ನು ಒಟ್ಟು ಸೇರಿಸಿ ಮಾಡಲಾಗುವ ಅಪೇಕ್ಷಿತ ಮಾರ್ಪಾಡುಗಳು ನೈಜ ಅಭಿವೃದ್ಧಿ ಎಂದೆನಿಸಿಕೊಳ್ಳುತ್ತದೆ ಎಂದು ರಾಜ್ಯ ಪಂಚಾಯತ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಉಪ್ಪುಂದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಕುಂದಾಪ್ರ ಡಾಟ್ ಕಾಂ ವತಿಯಿಂದ ಆಯೋಜಿಸಲಾದ ‘ವಿಷನ್ ಬೈಂದೂರು 2033’ ಕಾರ್ಯಕ್ರಮ ಉದ್ಘಾಟಿಸಿ, ಅಭಿವೃದ್ಧಿಯ ಪರಿಕಲ್ಪನೆ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಿದರು. ಯುನೈಟೆಟ್‍ […]