ಉಡುಪಿ ಕೃಷ್ಣಮಠ: ಮಳೆಯ ನಡುವೆಯೇ ವಿಟ್ಲಪಿಂಡಿ ಉತ್ಸವ ಸಂಪನ್ನ

ಉಡುಪಿ: ಕೊರೊನಾ ಕಾರಣದಿಂದ ಇದೇ ಮೊದಲ ಬಾರಿಗೆ ಭಕ್ತ ಸಮೂಹದ ಅನುಪಸ್ಥಿತಿಯಲ್ಲಿ ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಉಡುಪಿ ಕೃಷ್ಣಮಠದಲ್ಲಿ ಇಂದು ಮಳೆಯ ಜೊತೆಯಲ್ಲಿ ಸರಳ ರೀತಿಯಲ್ಲಿ ಸಂಪ್ರದಾಯದಂತೆ ನೆರವೇರಿತು. ಶ್ರೀಕೃಷ್ಣ ಮುಖ್ಯಪ್ರಾಣರಿಗೆ ಪರ್ಯಾಯ ಈಶಪ್ರಿಯತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು. ಬಳಿಕ ರಥಬೀದಿಯಲ್ಲಿ ವೈಭವದ ವಿಟ್ಲಪಿಂಡಿ ಮೆರವಣಿಗೆ ನಡೆಯಿತು. ಕೊರೊನಾ ಬಿಕ್ಕಟ್ಟಿನ ನಡುವೆ ಉತ್ಸವಕ್ಕೆ ಸುಮಾರು ನೂರರ ಆಸುಪಾಸಿನ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಯಾದರು.   ವಿಟ್ಲಪಿಂಡಿ ಉತ್ಸವದ ಅಂಗವಾಗಿ ಮಣ್ಣಿನಿಂದ ತಯಾರಿಸಿದ ಶ್ರೀಕೃಷ್ಣನ ಮೂರ್ತಿಯನ್ನು […]