ಖ್ಯಾತ ನಿರ್ಮಾಪಕ ವಿ.ಕೆ ಮೋಹನ್ ನೇಣಿಗೆ ಶರಣು !

ಬೆಂಗಳೂರು : ನಿರ್ಮಾಪಕ, ಉದ್ಯಮಿ ವಿ.ಕೆ.ಮೋಹನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯ ಮೋಹನ್ ಅವರು ಪೀಣ್ಯದಲ್ಲಿರುವ ಹೋಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಿನಿಮಾ ನಿರ್ಮಾಪಕರಾಗಿ, ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಇವರು ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡಾ.ರಾಜಕುಮಾರ್ ಅವರ ಕುಟುಂಬದೊಂದಿಗೆ ಅವಿನಾಭಾವ ಸಂಬಂಧವನ್ನುಇವರು ಹೊಂದಿದ್ದರು.