ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಕಾಲೇಜಿನ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರರು ಅಭಿನಂದಿಸಿದ್ದಾರೆ.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕುಂದಾಪುರ: ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಇವರು ಪಂದ್ಯವನ್ನುದ್ಘಾಟಿಸಿ ಮಾತನಾಡಿ, ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾಳುಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವಂತೆ ಆಟವಾಡಬೇಕೆಂದು ಹೇಳುತ್ತಾ, ಸಂಸ್ಥೆಯ ಅಚ್ಚುಕಟ್ಟಾದ ಕ್ರೀಡಾ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ […]

ಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ನಿಟ್ಟೆ ಕಾಲೇಜಿಗೆ ಪ್ರಶಸ್ತಿಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ನಿಟ್ಟೆ ಕಾಲೇಜಿಗೆ ಪ್ರಶಸ್ತಿ

ನಿಟ್ಟೆ: ಜೂ.25 ಹಾಗೂ 26 ರಂದು ಬೆಂಗಳೂರಿನ ಜೆ.ಎಸ್.ಎಸ್ ಅಕಾಡೆಮಿ ತಾಂತ್ರಿಕ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ ಎಂದು ಕಾಲೇಜು ತಿಳಿಸಿದೆ.