ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಸಂಚಾರ ಪ್ರಾರಂಭ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭಿಸಲು ಜನರಿಂದ ಬೇಡಿಕೆ ಬರುತ್ತಿದ್ದರೂ ಕಾರಣಾಂತರಗಳಿಂದ ಇಲ್ಲಿಗೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಬಸ್ ಪುನರ್ ಸಂಚಾರಕ್ಕೆ ಮುಹೂರ್ತ ಕೂಡಿ ಬಂದಿದ್ದು, ಮಂಗಳೂರು ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭವಾಗಲಿದೆ. ಹಲವು ವರ್ಷಗಳಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ಇದ್ದರೂ ಕೂಡ […]