ಮತ ಎಣಿಕೆಗೆ ಸಂಪೂರ್ಣ ಸಜ್ಜು- ಉಡುಪಿ ಜಿಲ್ಲಾಧಿಕಾರಿ

ಉಡುಪಿ, : ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಬುಧವಾರ, ಮತ ಎಣಿಕೆ ಕೇಂದ್ರದಲ್ಲಿನ ಸಿದ್ದತೆಗಳ ಕುರಿತು ಪರಿಶೀಲಿಸಿ ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದನ್ವಯ, ನಿಗಧಿತ ಸಮಯಕ್ಕೆ ಸರಿಯಾಗಿ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು, ಇವಿಎಂಗಳ ಎಣಿಕೆ ನಂತರ ವಿವಿ ಪ್ಯಾಟ್‍ನ ಸ್ಲಿಪ್‍ಗಳ ಎಣಿಕೆ ಮಾಡಲಾಗುವುದು, ಮತ ಎಣಿಕೆಗೆ ನಿಯೋಜಿಸಿರುವ […]