ಮತದಾರರ ಮನೆ ಬಾಗಿಲಿಗೆ ತೆರಳಿ ವೋಟರ್ ಸ್ಲಿಪ್ ವಿತರಿಸಿದ ಡಿಸಿ

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆ ಅಂಗವಾಗಿ, ಉಡುಪಿಯ ಮಿಷನ್ ಕಾಂಪೌಂಡ್ ಮತ್ತು ಅಮ್ಮಣ್ಣಿ ರಾಮಣ್ಣ ಹಾಲ್ ಬಳಿಯ ಮತದಾರರರಿಗೆ , ಮತದಾರರ ಭಾವಚಿತ್ರವಿರುವ ವೋಟರ್ ಸ್ಲಿಪ್ ಗಳನ್ನು , ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಮನೆ ಬಾಗಿಲಿಗೆ ತೆರಳಿ ಮಂಗಳವಾರ ವಿತರಿಸಿದರು. ಮತದಾರರಿಗೆ ವೋಟರ್ ಸ್ಲಿಪ್ ವಿತರಿಸಿದ ಜಿಲ್ಲಾಧಿಕಾರಿ, ಮತದಾರರಿಗೆ ಮತದಾನ ದಿನಾಂಕವನ್ನು ತಿಳಿಸಿ, ತಪ್ಪದೇ ಮತದಾನ ಮಾಡುವಂತೆ ತಿಳಿಸಿ, ಮತಕೇಂದ್ರದಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ, […]
ಮತದಾನ ಜಾಗೃತಿ ಕಾರ್ಯಕ್ರಮಗಳ ವೇಳಾಪಟ್ಟಿ ತಯಾರಿಸಿ: ಸಿಂಧೂ ಬಿ ರೂಪೇಶ್ ಸೂಚನೆ

ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಎಲ್ಲಾ ಇಲಾಖೆಯವರು ತಾವು ಮುಂದಿನ ದಿನಗಳಲ್ಲಿ ನಡೆಸುವ ಕಾರ್ಯಕ್ರಮದ ವೇಳಾಪಟ್ಟಿಯ ತಯಾರಿಸಿ ಗುರುವಾರ ಸ್ವೀಪ್ ಸಮಿತಿಗೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಮುಂಬರುವ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿಯ ವತಿಯಿಂದ ಕೈಗೊಳ್ಳಬೇಕಾದ ಮತದಾನ ಜಾಗೃತಿ ಕಾರ್ಯಕ್ರಮದ ಅನುಷ್ಟಾನ ಕುರಿತ ಸಭೆಯಲ್ಲಿ […]